ಪರಿವರ್ತನ ಪ್ರಭಾ:
ಹರಿಯಾಣ ವಿಧಾನಸಭಾ ಚುನಾವಣೆಯ ಫಲಿಕಾಂಶ ಕುರಿತು ವಿಶ್ಲೇಷಿಸಲಾಗುತ್ತಿದ್ದು, ಹಲವು ವಿಧಾನಸಭಾ ಕ್ಷೇತ್ರಗಳಿಂದ ಬಂದ ದೂರುಗಳ ಬಗ್ಗೆ ಚುನಾವಣಾ ಆಯೋಗದ ಗಮನ ಸೆಳೆಯಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ.
ಚುನಾವಣಾ ಫಲಿತಾಂಶ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಜಮ್ಮು- ಕಾಶ್ಮೀರದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಹೇಳಿ, ಹರಿಯಾಣ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು. ಇಂಡಿಯಾ ಮೈತ್ರಿಕೂಟದ ವಿಜಯವು ಸಂವಿಧಾನದ ವಿಜಯವಾಗಿದೆ. ಪ್ರಜಾಪ್ರಭುತ್ವದ ಸ್ವಾಭಿಮಾನಕ್ಕೆ ಸಂದ ಜಯವಾಗಿದೆ ಎಂದು ಹೇಳಿದ್ದಾರೆ.
ಹರಿಯಾಣದ ಅನಿರೀಕ್ಷಿತ ಫಲಿತಾಂಶವನ್ನು ನಾವು ವಿಶ್ಲೇಷಿಸುತ್ತಿದ್ದೇವೆ. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುತ್ತೇನೆ. ಹರ್ಯಾಣದಲ್ಲಿ ಪಕ್ಷವನ್ನು ಬೆಂಬಲಿಸಿದ ಎಲ್ಲಾ ಜನರಿಗೆ ಮತ್ತು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು.
ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ನಿಮ್ಮ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆಂದು ತಿಳಿಸಿದ್ದಾರೆ.
ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ 3ನೇ ಬಾರಿಗೆ ವಿಜಯ ಸಾಧಿಸಿದ್ದು, ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಸರ್ವಾಧಿಕ 29 ಸ್ಥಾನ ಗೆದ್ದಿದೆಯಾದರೂ, ಕಾಶ್ಮೀರ ಭಾಗದಲ್ಲಿ ಉತ್ತಮ ಸ್ಥಾನ ಗಳಿಸಲು ವಿಫಲವಾಗಿದೆ. ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫ್ರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಗೆ ಭರ್ಜರಿ ಜಯ ಸಿಕ್ಕಿದೆ
Post Views: 19