ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

ಪರಿವರ್ತನ ಪ್ರಭಾ:
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ​ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್​ ಮದ್ವರಾಜ್​ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಇನ್ನು ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ಮಾಹಿತಿ ದೊರೆತಿದೆ.

Leave a Reply

Your email address will not be published. Required fields are marked *