ದಾಸನ ಜಾಮೀನು ಅರ್ಜಿ ವಿಚಾರಣೆಗೆ ಡೇಟ್ ಫಿಕ್ಸ್​! ಹೈಕೋರ್ಟ್​ನಲ್ಲಿ ಸಿಗುತ್ತಾ ದರ್ಶನ್ ಗೆ ಬೇಲ್?

ಪರಿವರ್ತನ್ ಪ್ರಭ:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಅಕ್ಟೋಬರ್ 14ರಂದು ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್​ ಭಾರೀ ನಿರಾಸೆಯಾಗಿತ್ತು. ಜಾಮೀನು ಅರ್ಜಿ ವಜಾ ಬೆನ್ನಲ್ಲೇ ದರ್ಶನ್ ಜಾಮೀನು ವಜಾ ಆದೇಶ ಪ್ರತಿ ಪಡೆದ ವಕೀಲರು ಹೈಕೋರ್ಟ್ ನಲ್ಲಿ ಬೇಲ್ ಅರ್ಜಿ ಸಲ್ಲಿಕೆ ಮಾಡಿದ್ರು.
ಇದೀಗ ಹೈಕೋರ್ಟ್​ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆಗೆ ಡೇಟ್ ಫಿಕ್ಸ್ ಮಾಡಲಾಗಿದೆ.

ಕೋರ್ಟ್​ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 22ಕ್ಕೆ ದರ್ಶನ್ ಬೇಲ್ ಭವಿಷ್ಯ ಹೊರಬೀಳಲಿದೆ. ನಿನ್ನೆ (ಅ.15) ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ರು. ಇದೇ ವೇಳೆ ಅರ್ಜಿಯ ತುರ್ತು ವಿಚಾರಣೆಗೂ ಮನವಿ ಮಾಡಿದ್ರು.

ಅಕ್ಟೋಬರ್ 22ಕ್ಕೆ ಹೈಕೋರ್ಟ್​ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ರೇಣುಕಾಸ್ವಾಮಿ ಕೇಸ್ ಕುರಿತ ವಾದ-ಪ್ರತಿವಾದ ನಡೆಯಲಿದೆ.

ಜಾಮೀನು ಕೋರಿ ನಟ ದರ್ಶನ್ ಪರ ವಕೀಲ ಸುನಿಲ್ ಕುಮಾರ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸೆಷನ್ಸ್ ಕೋರ್ಟ್ ನ ಆದೇಶದ ಪ್ರತಿ ಜೊತೆಗೆ ದರ್ಶನ್ ಜಾಮೀನು ಅರ್ಜಿಯಲ್ಲಿ ಕೆಲ ಪ್ರಮುಖ ಅಂಶಗಳನ್ನು ಉಲ್ಲೇಖಿಸಿದ್ದಾರೆ. ದರ್ಶನ್ ಆರೋಗ್ಯ ಸಮಸ್ಯೆ ಬಗ್ಗೆ ಅರ್ಜಿಯಲ್ಲಿ ವಿವರಿಸಲಾಗಿದೆ ಎನ್ನಲಾಗ್ತಿದೆ.

ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ದರ್ಶನ್ ಅವರನ್ನು ಅತಿಯಾದ ಬೆನ್ನು ನೋವು ಕಾಡುತ್ತಿದೆ. L1, L5 ಸ್ಪೈನಲ್ ಕಾರ್ಡ್ ಸಮಸ್ಯೆಯಿಂದ ದರ್ಶನ್ ನೊಂದಿದ್ದಾರೆ. ಜೈಲಿನಲ್ಲಿರುವ ದರ್ಶನ್ ಅವರಿಗೆ ಬೆನ್ನು ನೋವಿನಿಂದಾಗಿ ನಿಲ್ಲಲು, ಕೂರಲು, ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗ್ತಿದೆ.

ಬೆಂಗಳೂರಿನ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅಗತ್ಯ ಇದೆ. ಈ ಬಗ್ಗೆ ವಿಮ್ಸ್ ಆಸ್ಪತ್ರೆ ವೈದ್ಯರ ಸಲಹೆ ನೀಡಿದ್ದಾರೆ ಎಂಬುದನ್ನು ದಾಖಲೆ ಸಮೇತ ಅರ್ಜಿಯಲ್ಲಿ ನೀಡಿದ್ದಾರೆ. ಜೊತೆಗೆ ಕೇಸ್ ಬಗೆಗಿನ ತನಿಖೆಯಲ್ಲಿ ಲೋಪಗಳ ಪಟ್ಟಿಯನ್ನು ಕೂಡ ನೀಡಲಾಗಿದೆ ಎನ್ನಲಾಗ್ತಿದೆ.

ಈ ಕೇಸ್ ತನಿಖೆ ವೇಳೆ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನ ತಡವಾಗಿ ಪಡೆದಿರುವುದು ಅನುಮಾನಸ್ಪದವಾಗಿದೆ. ಅಷ್ಟೇ ಅಲ್ಲದೆ ಡಿಜಿಟಲ್ ಸಾಕ್ಷಿಗಳು ಸೃಷ್ಟಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾದ ಸಾಕ್ಷ್ಯಗಳು ಸೃಷ್ಟಿಸ್ಪಟ್ಟವು. ಕೃತ್ಯ ನಡೆದ ದಿನದ ಸಿಡಿಆರ್ ನಲ್ಲಿ ಯಾವುದೇ ವಿಶೇಷತೆ ಇಲ್ಲ. ಆಪ್ತರ ಜೊತೆಗಿನ ಕಾಲ್ ನಲ್ಲಿ ಯಾವುದೇ ಸಂಚು ನಡೆದಿಲ್ಲ ಎನ್ನುವ ವಿಚಾರಗಳನ್ನು ಬೇಲ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗ್ತಿದೆ.

ಬೇಲ್ ಚಿಂತೆಯಲ್ಲೇ ರಾತ್ರಿಯೆಲ್ಲಾ ನಿದ್ದೆ ಮಾಡದೆ ದರ್ಶನ್ ಒದ್ದಾಡಿದ್ದಾರೆ ಎನ್ನಲಾಗ್ತಿದೆ. ಸರಿಯಾಗಿ ಊಟ ಇಲ್ಲ, ನಿದ್ದೆ ಇಲ್ಲ, ಬೆನ್ನು ನೋವಿನಿಂದ ನರಳುತ್ತಿರುವ ದರ್ಶನ್ ಸೆರೆಮನೆ ವಾಸದಿಂದ ಮುಕ್ತಿ ಸಿಗುವ ದಿನಕ್ಕಾಗಿ ಕಾಯ್ತಿದ್ದಾರೆ. ಸಿಬ್ಬಂದಿ ಬಳಿ ಬೇಲ್ ಅರ್ಜಿ ವಜಾಗೊಂಡ ವಿಚಾರದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬೇಲ್ ರಿಜೆಕ್ಟ್ ಆದ ಸುದ್ದಿ ಕೇಳಿ ಶಾಕ್ ಆದ ದರ್ಶನ್, ಸೆಲ್​ನಲ್ಲಿ ಕುಳಿತು ಕಣ್ಣೀರು ಹಾಕಿದ್ದರಂತೆ.

Leave a Reply

Your email address will not be published. Required fields are marked *