https://eprabhanews.com E Prabha News Sat, 19 Oct 2024 06:02:13 +0000 en-US hourly 1 https://wordpress.org/?v=6.6.2 ಸಿದ್ದರಾಮಯ್ಯನವರೇ ವೈಯಕ್ತಿಕ ಪ್ರತಿಷ್ಠೆಗಾಗಿ ರಾಜ್ಯದ ಭವಿಷ್ಯವನ್ನು ಬಲಿ ಕೊಡಬೇಡಿ ಎಂದ ವಿರೋಧ ಪಕ್ಷದ ನಾಯಕ ಆರ್. ಅಶೋಕ https://eprabhanews.com/2024/10/19/do-not-sacrifice-the-future-of-the-state-for-personal-prestige-r-ashok/ https://eprabhanews.com/2024/10/19/do-not-sacrifice-the-future-of-the-state-for-personal-prestige-r-ashok/#respond Sat, 19 Oct 2024 06:02:08 +0000 https://eprabhanews.com/?p=3091 ಪರಿವರ್ತನ್ ಪ್ರಭ:

15 ಬಜೆಟ್ ಮಂಡಿಸಿರುವ ಸ್ವಯಂಘೋಷಿತ ಆರ್ಥಿಕ ತಜ್ಞರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರೂ ಸಂಪನ್ಮೂಲ ಸಂಗ್ರಹಣೆಯಲ್ಲಿ ಶೇ.4% ರಷ್ಟು ಹಿನ್ನಡೆಯಗಿದ್ದು, ಕಾಂಗ್ರೆಸ್​ ಸರ್ಕಾರ ಬಂದಾಗಿನಿಂದ ಕುಸಿಯುತ್ತಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ ವಾಗ್ದಾಳಿ ನಡೆಸಿದ್ದಾರೆ.

‘ಸಿದ್ದರಾಮಯ್ಯನವರೇ, ತೆರಿಗೆ ಸಂಗ್ರಹ ಕುಸಿತವಾಗಿರುವುದಕ್ಕೆ ಗ್ಯಾರೆಂಟಿ ಫಲಾನುಭವಿಗಳನ್ನು ಯಾಕೆ ಹೊಣೆ ಮಾಡುತ್ತಿದ್ದೀರಿ?ಗ್ಯಾರೆಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಈ ಹಿಂದೆ ತಾವೇ ಹೇಳಿಕೊಂಡಿದ್ದೀರಿ. ಈಗ ತೆರಿಗೆ ಸಂಗ್ರಹ ಕಡಿಮೆಯಾಗುತ್ತಿದ್ದಂತೆ ಗ್ಯಾರೆಂಟಿ ಯೋಜನೆಗಳ ಮೇಲೆ ಗೂಬೆ ಕೂರಿಸಿ ಫಲಾನುಭವಿಗಳಿಗೆ ಕತ್ತರಿ ಹಾಕುವುದು ಯಾವ ನ್ಯಾಯ?’ ಎಂದು ಪ್ರಶ್ನಿಸಿದರು.

‘ಕೋವಿಡ್​ನಂತಹ ಯಾವುದೇ ಸಾಂಕ್ರಾಮಿಕ ರೋಗದ ಸವಾಲಿಲ್ಲ, ಆರ್ಥಿಕತೆಯನ್ನು ಮಂದಗೊಳಿಸುವ ಯಾವುದೇ ಭೀಕರ ನೈಸರ್ಗಿಕ ವಿಕೋಪ ಸಂಭವಿಸಿಲ್ಲ, ಯುದ್ಧ ಅಥವಾ ಇನ್ಯಾವುದೇ ರೀತಿಯ ಅನಿಶ್ಚಿತತೆ ಇಲ್ಲ. ಇಂತಹ ಅನುಕೂಲಕರ ಪರಿಸ್ಥಿತಿಯಲ್ಲಿಯೂ ಸಹ ಕರ್ನಾಟಕದಂತಹ ವಿಕಾಸಾಶೀಲ, ಸಂಪದ್ಭರಿತ ರಾಜ್ಯದಲ್ಲಿ ತೆರಿಗೆ ಸಂಗ್ರಹ ಕಡಿಮೆಯಾಗಿದೆ ಅಂದರೆ ಅದಕ್ಕೆ ತಮ್ಮ ಸರ್ಕಾರದ ದುರಾಡಳಿತ ಮತ್ತು ವೈಫಲ್ಯವೇ ಕಾರಣ. ಹೂಡಿಕೆದಾರರು, ಉದ್ದಿಮೆಗಳು ತಮ್ಮ ಮತ್ತು ತಮ್ಮ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿರುವುದೇ ಕಾರಣ’ ಎಂದರು.

‘ಈಗಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಯಾರಾದರೂ ಸಮರ್ಥರಿಗೆ ದಾರಿ ಮಾಡಿ ಕೊಡಿ. ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ರಾಜ್ಯದ ಭವಿಷ್ಯವನ್ನ ಬಲಿ ಕೊಡಬೇಡಿ’ ಎಂದು ಹೇಳಿದ್ದಾರೆ.

]]>
https://eprabhanews.com/2024/10/19/do-not-sacrifice-the-future-of-the-state-for-personal-prestige-r-ashok/feed/ 0 3091
ಇ ಡಿ ತನಿಖೆಗೆ ಮುಡಾ ಸಂಪೂರ್ಣವಾಗಿ ಸಹಕರಿಸಿ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ https://eprabhanews.com/2024/10/18/muda-will-fully-cooperate-with-the-ed-investigation-and-provide-all-the-documents/ https://eprabhanews.com/2024/10/18/muda-will-fully-cooperate-with-the-ed-investigation-and-provide-all-the-documents/#respond Fri, 18 Oct 2024 13:55:04 +0000 https://eprabhanews.com/?p=3087 ಪರಿವರ್ತನ್ ಪ್ರಭ:

ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕುಟುಂಬ ಸದಸ್ಯರು ಮತ್ತಿತರರ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೋರಿರುವ ಎಲ್ಲಾ ದಾಖಲೆಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ನೀಡಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶುಕ್ರವಾರ ಹೇಳಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಶುಕ್ರವಾರ ಮೈಸೂರಿನ ಮುಡಾ ಕಚೇರಿ ಮತ್ತು ಇತರ ಕೆಲವು ಸ್ಥಳಗಳಲ್ಲಿ ಶೋಧ ನಡೆಸಿದ ಬೆನ್ನಲ್ಲೇ ಸಚಿವ ಸುರೇಶ್ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ.

“ಯಾವುದೇ ದಾಖಲೆಗಳನ್ನು ಕೋರಿದರೂ, ಮುಡಾ ನೀಡುತ್ತದೆ…ಇಸಿಐಆರ್ (Enforcement Case Information Report) ಬುಕ್ ಮಾಡಿದ ನಂತರ ಸಿಎಂ ವಿರುದ್ಧ ದಾಳಿ ಮಾಡಲು ಇಡಿ ಅಧಿಕಾರವನ್ನು ಪಡೆದಿದೆ ಎಂದು ಹೇಳಲಾಗುತ್ತದೆ, ಅವರು ಯಾವುದೇ ದಾಖಲೆಗಳನ್ನು ಕೇಳಿದರೂ ಮುಡಾ ನೀಡುತ್ತದೆ. ನಾವು ಇದರಲ್ಲಿ ಭಾಗಿಯಾಗುವ ಪ್ರಶ್ನೆಯೇ ಇಲ್ಲ, ಅಧಿಕಾರಿಗಳು ದಾಖಲೆಗಳನ್ನು ಒದಗಿಸುತ್ತಾರೆ” ಎಂದು ಸುರೇಶ್ ಹೇಳಿಕೆ ನೀಡಿದ್ದಾರೆ.

”ಇದು ನಮ್ಮ ದೇಶದ ಕಾನೂನು, ಇದು ನಮ್ಮ ಇಡಿ, ಪೊಲೀಸ್ ಮತ್ತು ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿಯ ಮಿತಿಗಳನ್ನು ತಿಳಿದಿದ್ದಾರೆ. ಇಡಿ ತನಿಖೆ ಮಾಡಲಿ. ಇಂದು ಆಗಿರುವುದು ದಾಳಿಯಲ್ಲ, ದಾಖಲೆಗಳನ್ನು ಹುಡುಕುತ್ತಿದ್ದಾರೆ. ದಾಖಲೆಗಳನ್ನು ಹುಡುಕುವುದನ್ನು ನೀವು ಹೇಗೆ ದಾಳಿ ಎಂದು ಕರೆಯುತ್ತೀರಿ? . ಅಧಿಕಾರಿಗಳು ಕೇಳಿದಷ್ಟು ಕೊಡುತ್ತಾರೆ. 8 ಲಕ್ಷ ಪುಟಗಳ ದಾಖಲೆಗಳಿವೆ. ದೇಸಾಯಿ ಸಮಿತಿಗೆ 8 ಲಕ್ಷ ಪುಟ ನೀಡಿದ್ದು, ಕೇಳಿದರೆ ಇಡಿ ಗೂ ನೀಡಲಾಗುವುದು. 8 ಲಕ್ಷ ಪುಟಗಳ ಜೆರಾಕ್ಸ್ ತೆಗೆಯಲು ಒಂದು ವಾರ ಬೇಕಾಗಬಹುದಾದ್ದರಿಂದ ಒಂದೇ ದಿನದಲ್ಲಿ ನೀಡಲು ಸಾಧ್ಯವಾಗದೇ ಇರಬಹುದು” ಎಂದರು.

]]>
https://eprabhanews.com/2024/10/18/muda-will-fully-cooperate-with-the-ed-investigation-and-provide-all-the-documents/feed/ 0 3087
ಚನ್ನಪಟ್ಟಣ ಉಪಚುನಾವಣೆಗೆ ಡಿ ಕೆ ಬ್ರದರ್ಸ್‌ ಭರ್ಜರಿ ತಯಾರಿ: ಹಾಗಾದ್ರೆ ಕಾಂಗ್ರೆಸ್ ಅಭ್ಯರ್ಥಿ ಯಾರು? https://eprabhanews.com/2024/10/18/dk-brothers-preparation-for-the-channapatna-by-election/ https://eprabhanews.com/2024/10/18/dk-brothers-preparation-for-the-channapatna-by-election/#respond Fri, 18 Oct 2024 11:47:56 +0000 https://eprabhanews.com/?p=3084 ಪರಿವರ್ತನ್ ಪ್ರಭ:

ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ಚನ್ನಪಟ್ಟಣ ಕ್ಷೇತ್ರವನ್ನ ಗೆಲ್ಲುವ ನಿಟ್ಟಿಲ್ಲಿ ಡಿ ಕೆ ಬ್ರದರ್ಸ್‌ ಭರ್ಜರಿ ತಯಾರಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಕೈ ನಾಯಕರು ಹೇಳಿಕೆ ನೀಡಿದ್ದು, ಅಭ್ಯರ್ಥಿ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಮಾಧ್ಯಮಗಳ ಜೊತೆಗೆ ಶುಕ್ರವಾರ ಮಾತನಾಡಿ, ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೇ ಅಭ್ಯರ್ಥಿ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆಯ ಕುರಿತು ಮಾತನಾಡಿ, ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು

ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈಗ ಚುನಾವಣಾ ನೀತಿ ಸಂಹಿತೆ ಇದೆ. ಇದಾದ ನಂತರ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರುಗಳಿಗೆ ಗೌರವಯುತವಾಗಿ ಹೇಳಿದ್ದೇವೆ ಅವರ ಭಾವನೆ, ಕಳಕಳಿ ನಮಗೆ ಅರ್ಥವಾಗುತ್ತದೆ. ಮುಂದಿನ ದಿನಗಳಲ್ಲಿ ನಾವು ಅವರ ವಿಚಾರವನ್ನು ಪರಿಗಣಿಸುತ್ತೇವೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಎಸ್‌ಐಟಿಯನ್ನು ಶಿವಕುಮಾರ್ ತನಿಖಾ ಸಂಸ್ಥೆ ಎಂದು ಟೀಕಿಸಿರುವ ಕುರಿತು ಮಾತನಾಡಿ, ಕುಮಾರಸ್ವಾಮಿ ಅವರಿಗೆ ನನ್ನನ್ನು ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ. ಅವರು ಹಾಗೂ ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕುತ್ತಿದ್ದಾರೆ. ನನ್ನ ಎಲ್ಲಾ ದಾಖಲೆಗಳು ಇಡಿ ಸಿಬಿಐ ಬಳಿ ಇವೆ. ಹೊಸದಾಗಿ ಹುಡುಕುವುದೇನಿಲ್ಲ. ಅವರು ನನಗೆ ಕೇಳಿದ್ದರೆ ನಾನೇ ಅವರಿಗೆ ನನ್ನ ದಾಖಲೆಗಳನ್ನು ಒದಗಿಸುತ್ತಿದ್ದೆ. ನಾವು ಇನ್ನು ಅವರ ಸುದ್ದಿಗೆ ಹೋಗಿಲ್ಲ. ಉಳಿದ ವಿಚಾರ ಆನಂತರ ಮಾತನಾಡೋಣ ಎಂದು ತಿಳಿಸಿದರು.

ಮೂಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಇಡಿ ದಾಳಿ ಬಗ್ಗೆ ಕೇಳಿದಾಗ, “ಇಡಿ ಅವರು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ. ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು. ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲಾ ದಾಖಲೆಗಳು ಸಾರ್ವಜನಿಕವಾಗಿವೆ. ನಾವು ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ವಾಸ್ತವಾಂಶ ಜನರ ಮುಂದಿಡುತ್ತೇವೆ” ಎಂದರು.

ಈ ಹಿಂದೆ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಅನೇಕ ಬಾರಿ ಹೇಳಿದ್ದೀರಿ ಎಂದು ಕೇಳಿದಾಗ, “ಈ ಪ್ರಕರಣ ನ್ಯಾಯಾಲಯದಲ್ಲಿದೆ, ಅವರು ಮೂಡಾ ಕಚೇರಿಗೆ ಭೇಟಿ ನೀಡಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ಇಡಿ ಅವರು ದಾಖಲೆಗಳನ್ನು ಕೇಳಿದ್ದರು, ಇವರು ದಾಖಲೆ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ದಾಖಲೆ ನೀಡುವುದು ತಡವಾಗಿರಬಹುದು, ಇದಕ್ಕಾಗಿ ಇಡಿ ಅವರೇ ಕಚೇರಿಗೆ ಹೋಗಿರಬಹುದು” ಎಂದರು.

ನೈಸ್ ರಸ್ತೆ ವಿಚಾರವಾಗಿ ಕುಮಾರಸ್ವಾಮಿ ಅವರ ವಿಚಾರವಾಗಿ ಕೇಳಿದಾಗ, “ನೈಸ್ ವ್ಯಾಪ್ತಿಯಲ್ಲಿ ಅವರ ಆಸ್ತಿ ಎಷ್ಟಿದೆ ಎಂದು ಮೊದಲು ಅವರು ಬಹಿರಂಗಪಡಿಸಲಿ. ಸಮಯ ಬಂದಾಗ ನಾನು ಅದನ್ನು ಹೇಳುತ್ತೇನೆ” ಎಂದು ತಿಳಿಸಿದರು.

]]>
https://eprabhanews.com/2024/10/18/dk-brothers-preparation-for-the-channapatna-by-election/feed/ 0 3084
ಮುಡಾ ಹಗರಣ: 5000 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದ ಸ್ನೇಹಮಯಿ ಕೃಷ್ಣ https://eprabhanews.com/2024/10/18/muda-scam-5000-crores-of-rupees-was-illegally-committed/ https://eprabhanews.com/2024/10/18/muda-scam-5000-crores-of-rupees-was-illegally-committed/#respond Fri, 18 Oct 2024 11:18:25 +0000 https://eprabhanews.com/?p=3081 ಪರಿವರ್ತನ್ ಪ್ರಭ:

ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ 12 ಅಧಿಕಾರಿಗಳ ನೇತೃತ್ವದ ಇಡಿ ತಂಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ದಾಳಿ ನಡೆಸಿದೆ. ಈ ಮೂಲಕ ಮುಡಾ ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದೆ.
ಮುಡಾ ಆಯುಕ್ತ ರಘುನಂದನ್, ನಗರ ಯೋಜಕ ಸದಸ್ಯ, ವಿಶೇಷ ಭೂ‌ಸ್ವಾಧೀನ ಅಧಿಕಾರಿಗಳ ಜತೆ ಇಡಿ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಮುಡಾ ಅಧಿಕಾರಿಗಳ ಸಭೆ ಬಳಿಕ ಕಡತಗಳನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮುಡಾದಲ್ಲಾಗಿರುವ 50-50 ಅನುಪಾತದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ. ಹಿಂದಿನ ಇಬ್ಬರು ಮುಡಾ ಅಧಿಕಾರಿಗಳಾದ ಡಾ.ಡಿ.ಬಿ.ನಟೇಶ್ ಹಾಗೂ ಜಿ.ಡಿ.ದಿನೇಶ್ ಕುಮಾರ್ ಇಬ್ಬರನ್ನು ಕೂಡ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಮುಡಾ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಇಡಿ ಅಧಿಕಾರಿಗಳ ಜೊತೆ ಸಿಆರ್ ಪಿಎಫ್ ಯೋಧರು ಆಗಮಿಸಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಸೆಕ್ಯುರಿಟಿ ಫೋರ್ಸ್ ಅಧಿಕಾರಿಗಳು,‌ ಸಿಆರ್ ಪಿಎಫ್ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಕೂಡ ಜೊತೆಯಾಗಿದ್ದಾರೆ. ಮುಡಾ ಕಚೇರಿ ಒಳಗೆ ಪ್ರವೇಶಿಸಲು ಯಾರಿಗೂ ಅವಕಾಶ ಕೊಡುತ್ತಿಲ್ಲ, ಸಾರ್ವಜನಿಕ ಸೇವೆಗಳು ಕೂಡ ಲಭ್ಯವಿಲ್ಲ ಎಂದು ವಾಪಸ್ ಕಳಿಸಲಾಗುತ್ತಿದೆ.

ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಮಾತನಾಡಿ,ಇಡಿ ಅಧಿಕಾರಿಗಳು ಬೆಳಗ್ಗೆ ಬಂದಿದ್ದಾರೆ. ದಾಖಲೆಗಳನ್ನು ಕೇಳಿದ್ದಾರೆ. ನಾವು ಅವರಿಗೆ ಎಲ್ಲವನ್ನೂ ಒದಗಿಸುತ್ತಿದ್ದೇವೆ, ಅವರು ಕೇಳಿದ ಎಲ್ಲಾ ಮಾಹಿತಿ ನೀಡಿದ್ದೇವೆ. ಏನನ್ನೂ ಮಾತನಾಡಬಾರದು ಎಂದು ಸೂಚನೆ ಕೊಟ್ಟಿದ್ದಾರೆ. ಆ ಕಾರಣಕ್ಕೆ ನಾವು ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇಡಿ ತಂಡಕ್ಕೆ ಸಿಆರ್ ಪಿಎಫ್ ಯೋಧರಿಂದ ರಕ್ಷಣೆ ಒದಗಿಸಲಾಗಿದೆ. ಸಿಆರ್ ಪಿಎಫ್ ಯೋಧರ ಭದ್ರತೆಯೊಂದಿಗೆ ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದ್ದಾರೆ. ಶನಿವಾರ ಕೂಡ ಪರಿಶೀಲನೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

₹5000 ಕೋಟಿ ಅಕ್ರಮ ನಡೆದಿದೆ ಎಂದು ಇಡಿ ಅಧಿಕಾರಿಗಳಿಗೆ ದೂರು ನೀಡಿದ್ದೆ. ಈ ಸಂಬಂಧಿಸಿದಂತೆ ಇಂದು ಇಡಿ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ & ಮೈಸೂರು ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಮೈಸೂರಿನ ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಸಿದ್ದರಾಮಯ್ಯ 14 ಸೈಟ್‌ಗಳಿಗೆ ಮಾತ್ರ ಸಂಬಂಧಿಸಿದವುಗಳಲ್ಲ. 2015 ಇಸವಿಯಿಂದ ಇಲ್ಲಿಯವರೆಗೆ ನಡೆದಿರುವ ಅಕ್ರಮಗಳ ಬಗ್ಗೆ ಧಾಳಿ ಮಾಡಲಾಗಿದೆ. ಒಟ್ಟಾರೆ ಸುಮಾರು 5000 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

ಸೂಕ್ತ ದಾಖಲೆಗಳಿಲ್ಲದೆ ನಾನು ಯಾರ ವಿರುದ್ಧವೂ ಆರೋಪವನ್ನಾಗಲಿ, ಹೋರಾಟವನ್ನಾಗಲಿ ಮಾಡಲ್ಲ. ಕಾಂಗ್ರೆಸ್ ಆದರೂ ಸರಿ, ಬಿಜೆಪಿ ಆದರೂ ಸರಿ ಯಾರನ್ನೂ ನಾನು ಬಿಡುವುದಿಲ್ಲ, ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ಹೇಳಿದರು.

]]>
https://eprabhanews.com/2024/10/18/muda-scam-5000-crores-of-rupees-was-illegally-committed/feed/ 0 3081
‘ಪಂಚಮಸಾಲಿ’ ಸಮುದಾಯಕ್ಕೆ 2-A ಮೀಸಲಾತಿ..! CM ಸಿದ್ದರಾಮಯ್ಯ ಏನಂತಾರೆ..? https://eprabhanews.com/2024/10/18/2-a-reservation-for-panchamasali-community/ https://eprabhanews.com/2024/10/18/2-a-reservation-for-panchamasali-community/#respond Fri, 18 Oct 2024 10:28:06 +0000 https://eprabhanews.com/?p=3078 ಪರಿವರ್ತನ್ ಪ್ರಭ:

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು.

ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ.

ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ.

ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ ಎಂದರು.

]]>
https://eprabhanews.com/2024/10/18/2-a-reservation-for-panchamasali-community/feed/ 0 3078
ಸಿಪಿ ಯೋಗೇಶ್ವರ ಪರ ಒಲವು ತೋರಿದ ಬಿಜೆಪಿ, ಎಚ್‌ಡಿಕೆ ಗೆ ಮುಳುವು ಗ್ಯಾರೆಂಟಿ! https://eprabhanews.com/2024/10/18/bjp-who-favored-cp-yogeshwar/ https://eprabhanews.com/2024/10/18/bjp-who-favored-cp-yogeshwar/#respond Fri, 18 Oct 2024 09:57:23 +0000 https://eprabhanews.com/?p=3074 ಪರಿವರ್ತನ್ ಪ್ರಭ:

ಉಪ ಚುನಾವಣೆ ಘೋಷಣೆ ಆದ ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಚನ್ನಪಟ್ಟಣ ಪ್ರಮುಖ ರಾಜಕೀಯ ಶಕ್ತಿ ಕೇಂದ್ರವಾಗುವುದರಲ್ಲಿ ಎರಡು ಮಾತಿಲ್ಲ. ಮೊದಲಿನಿಂದಲೂ ಚನ್ನಪಟ್ಟಣ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ಬಿಜೆಪಿಯ ಸಿಪಿ ಯೋಗೇಶ್ವರ ಅವರು ಟಿಕೆಟ್ ಪಡೆಯುವಲ್ಲಿ ಭಾರೀ ಪ್ರಭಾವ ಬೀರಿದ್ದಾರೆ.

ಎಷ್ಟರ ಮಟ್ಟಿಗೆ ಎಂದರೆ ಬಿಜೆಪಿ ಗಾಳಿ ಯೋಗೇಶ್ವರ ಅವರತ್ತ ಬೀಸುತ್ತಿದೆ. ಅಂದರೆ ಅನೇಕ ನಾಯಕರು ಸಿಪಿವೈಗೆ ಟಿಕೆಟ್ ನೀಡುವಂತೆ ಬಹಿರಂಗವಾಗಿ ಮಾಡನಾಡುತ್ತಿದ್ದಾರೆ.

ಹೌದು, ಬಿಜೆಪಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಬೆನ್ನಲ್ಲೆ, ಸಂಸದ ಜಗದೀಶ್ ಶೆಟ್ಟರ್ ಅವರು, ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಅನ್ನು ಸಿಪಿ ಯೋಗೇಶ್ವರ ಅವರಿಗೆ ನೀಡುವಂತೆ, ಅವರ ಪರ ಒಲವು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮೈತ್ರಿ ಪಕ್ಷ ಜೆಡಿಎಸ್ ಹಾಗೂ ಎಚ್‌ಡಿ ಕುಮಾರಸ್ವಾಮಿ ಆಟ ನಡೆಯದಂತೆ ಮಾಡಲಾಗುತ್ತಿದೆ ಎಂಬ ಅನುಮಾನ ಮೂಡತೊಡಗಿದೆ.

ಏಕೆಂದರೆ ಬಿಜೆಪಿ-ಜೆಡಿಎಸ್ ಮೈತ್ರಿಗೂ ಮೊದಲು ಕಾಂಗ್ರೆಸ್ ಮಾತ್ರವಲ್ಲದೇ, ಬಿಜೆಪಿಯು ಹಳೇ ಮೈಸೂರು ಭಾಗದಲ್ಲಿ ಕಣ್ಣಿಟ್ಟಿತ್ತು. ಇದೀಗ ಆ ಕನಸು ನನಸು ಮಾಡಿಕೊಳ್ಳಲು ಒಳಗೊಳಗೇ ಪ್ಲಾನ್ ಮಾಡಿಕೊಳ್ಳಲಾಗುತ್ತಿದೆ ಅಂತಲೂ ವಿಶ್ಲೇಷಣೆ ಕೇಳಿ ಬಂದಿದೆ. ಹಾಗಾದರೆ ಸಿಪಿವೈ ಪರ ಜಗದೀಶ್ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ ಅವರು ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆಗೂ ಅವರ ಕೊಡುಗೆ ಇದೆ. ಕ್ಷೇತ್ರದಲ್ಲಿ ಅವರಿಗೆ ಹಿಡಿತ ಇದೆ ಎಂದ ಅವರು, ಈ ಉಪಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.

ಇದಷ್ಟೇ ಅಲ್ಲದೇ ಸಿಪಿ ಯೋಗೇಶ್ವರ ಅವರು, ಚೆನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು. ಬಿಜೆಪಿ ಜೆಡಿಎಸ್ ಗೆಲ್ಲಲು ಅವರಿಗೆ ಟಿಕೆಟ್ ನೀಡದರೆ ಅನುಕೂಲವಾಗಲಿದೆ. ಕಾಂಗ್ರೆಸ್ ವಿರುದ್ಧ ಗೆಲ್ಲುವ ಶಕ್ತಿ ಅವರಿಗೆ ಇದೆ. ನಾವು ಏನೇ ಹೇಳಿದರು, ಕೊನೆಗೆ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಮೂರು ಉಪ ಚುನಾವಣೆ ಕ್ಷೇತ್ರಗಳಿಗೆ ಯಾರನ್ನು ಕಣಕ್ಕಿಳಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

]]>
https://eprabhanews.com/2024/10/18/bjp-who-favored-cp-yogeshwar/feed/ 0 3074
ಪೊನ್ನಂಪೇಟೆ ಬಳಿಯ ಕುಂದ ಮಹದೇವರ ದೇವಸ್ಥಾನದಲ್ಲಿಂದು ‘ಕಾವೇರಿ’ ಅಭಿಷೇಕ https://eprabhanews.com/2024/10/18/kaveri-abhisheka-at-kunda-mahadev-temple/ https://eprabhanews.com/2024/10/18/kaveri-abhisheka-at-kunda-mahadev-temple/#respond Fri, 18 Oct 2024 09:04:11 +0000 https://eprabhanews.com/?p=3071 ಪರಿವರ್ತನ್ ಪ್ರಭ:

ಪೊನ್ನಂಪೇಟೆ ಬಳಿಯ ಇತಿಹಾಸ ಪ್ರಸಿದ್ಧ ಕುಂದ ಬೆಟ್ಟದಲ್ಲಿ ಅ.18ರಂದು ಅಲ್ಲಿನ ಮಹದೇವ ದೇವರಿಗೆ ಕಾವೇರಿ ತೀರ್ಥ ಅಭಿಷೇಕ ನಡೆಯಲಿದೆ. ಇದೇ ಸಂದರ್ಭದಲ್ಲಿ ಕೊಡಗಿನ ಮೊದಲ ಬೋಡ್ ನಮ್ಮೆ ಎಂದು ಖ್ಯಾತಿ ಹೊಂದಿರುವ ‘ಕುಂದಾತ್ ಬೊಟ್ಟ್ ಬೋಡ್ ನಮ್ಮೆ’ಗೆ ಚಾಲನೆಯೂ ದೊರಕಲಿದೆ. ಸಾಂಪ್ರದಾಯಿಕ ದೋಳ್ ತೆಗೆಯುವ ಮೂಲಕ ಕುಂದ ಬೆಟ್ಟದಲ್ಲಿ ಚಾಲನೆ ಕೊಡಲಿದ್ದಾರೆ.

ಕುಂದ ಮುಗುಟಗೇರಿ ಸಮೀಪದ ಈಶ್ವರ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ಪ್ರತಿವರ್ಷ ತಲಕಾವೇರಿಯಲ್ಲಿ ತೀರ್ಥೋದ್ಭವದ ದಿನ ಹಾಗೂ ಮರುದಿನ ಹಬ್ಬ ನಡೆಯಲಿದೆ. ಕಾವೇರಿ ತೀರ್ಥವನ್ನು ತಂದು ಬೆಟ್ಟದ ಮೇಲಿನ ಮಹದೇವ ದೇವರಿಗೆ ಅಭಿಷೇಕ ಮಾಡುತ್ತಾರೆ. ಈ ವರ್ಷವೂ ಅ. 18ರಂದು ಈ ಅಭಿಷೇಕ ಜರುಗಲಿದೆ ಎಂದು ಭಂಡಾರ ತಕ್ಕರಾರ ಸಣ್ಣುವಂಡ ಅಪ್ಪಿ ಪೂಣಚ್ಚ ತಿಳಿಸಿದ್ದಾರೆ.
ಸಣ್ಣುವಂಡ ಹಾಗೂ ಮನೆಯಪಂಡ ಕುಟುಂಬಸ್ಥರ ತಕ್ಕಾಮೆಯಲ್ಲಿ ಅಭಿಷೇಕ ನಡೆದ ಬಳಿಕ ಬೋಡ್ ನಮ್ಮೆ ಹಬ್ಬ ಜರುಗಲಿದೆ.
18ರಂದು ಮಧ್ಯಾಹ್ನ 12.30ಕ್ಕೆ ಸಣ್ಣುವಂಡ ಹಾಗೂ ಮನೆಯಪಂಡ ಕುಟುಂಬದ ಬಲ್ಯ (ಐನ್ ಮನೆ) ಮನೆಯಿಂದ ಕೃತಕವಾಗಿ ತಯಾರಿಸಿ ಶೃಂಗರಿಸಲಾದ ತಲಾ ಒಂದೊಂದು ಕುದುರೆಯನ್ನು ಹೊತ್ತವರು ಬೆಟ್ಟದ ತಪ್ಪಲಿನಲ್ಲಿರುವ ನಾಡ್ ದೇವಸ್ಥಾನಕ್ಕೆ ತೆರಳಲಿದ್ದಾರೆ. ಸಮೀಪದ ಅಂಬಲದಲ್ಲಿ ವಿವಿಧ ವಿಧಿವಿಧಾನಗಳನ್ನು ಆಚರಿಸಿ ನಂತರ ಕಡಿದಾದ ಬೆಟ್ಟವನ್ನು ಏರಲಿದ್ದಾರೆ. ಕುದುರೆಯ ಜತೆಯಲ್ಲಿಯೇ ಭಕ್ತರು ಕೂಗಿ ಕೊಂಡು ಬೆಟ್ಟ ಏರುತ್ತಾರೆ.

ಕಡಿದಾದ ಬೆಟ್ಟವನ್ನು ಏರಿದ ಮೇಲೆ ಅಲ್ಲಿ ಪಾಂಡವರು ನಿರ್ಮಿಸಿದರು ಎನ್ನಲಾಗುವ ಬೊಟ್ಟ್’ಲಪ್ಪ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯುತ್ತವೆ. ಮತ್ತೊಂದು ಕಡೆ ಜನತೆ ಕುದುರೆ ಜತೆ ವಾದ್ಯಮೇಳದೊಂದಿಗೆ ಕುಣಿದು ಕುಪ್ಪಳಿಸುತ್ತಾರೆ. ಇಲ್ಲಿ ಜಾತ್ರೆ ನಡೆಯಲಿದ್ದು ತಿಂಡಿ ತಿನಿಸುಗಳು, ಮಕ್ಕಳ ಆಟಿಕೆ ವಸ್ತುಗಳು, ಮಹಿಳೆಯರ ಅಲಂಕಾರಿಕ ವಸ್ತುಗಳ ಅಂಗಡಿಗಳೆಲ್ಲ ತೆರೆದಿರುತ್ತವೆ.
ಕುಂದ ಬೆಟ್ಟದ ಇತಿಹಾಸ: ಗೋಣಿಕೊಪ್ಪಲಿನಿಂದ 3 ಕಿ.ಮೀ, ಪೊನ್ನಂಪೇಟೆಯಿಂದ 5 ಕಿಮೀ ದೂರದ ಕುಂದದಲ್ಲಿ ಬೆಟ್ಟದ ಮೇಲೆ ಪಾಂಡವರು ನಿರ್ಮಿಸಿದ್ದರು ಎನ್ನಲಾದ ಕಲ್ಲಿನ ದೇವಾಲಯವಿದೆ.

ಇದು ಮಹದೇವರ ದೇವಾಲಯ. ಈ ದೇವಾಲಯಕ್ಕೆ ಬಾಗಿಲಿಲ್ಲ. ಪಾಂಡವರು ಒಂದೇ ರಾತ್ರಿಯಲ್ಲಿ ಬೆಳಗಾಗುವುದರ ಒಳಗೆ ದೇವಸ್ಥಾನ ನಿರ್ಮಿಸಿ ಅದಕ್ಕೆ ಬಾಗಿಲು ಅಳವಡಿಸಬೇಕು ಎಂದು ಪಣ ತೊಟ್ಟಿದ್ದರಂತೆ. ಆದರೆ, ಈ ವೇಳೆಗೆ ಬೆಳಕು ಹರಿದಿದ್ದರಿಂದ ಬಾಗಿಲು ಅಳವಡಿಸಲಾಗಲಿಲ್ಲ ಎಂದು ಅದರ ಹಿಂದಿನ ಪುರಾಣವನ್ನು ಹೇಳುತ್ತಾರೆ ಇಲ್ಲಿನ ಹಿರಿಯರು. ದೇವಸ್ಥಾನದ ಮೇಲಿನ ಗೋಪುರವನ್ನು ಸ್ಥಳೀಯರು ಈಚಿನ ವರ್ಷಗಳಲ್ಲಿ ಅಳವಡಿಸಿದ್ದಾರೆ.

ಹಾರುವ ಕುದುರೆ: ಅ.18ರಂದು ಬೆಟ್ಟದ ಮೇಲೆ ಬೋಡ್ ನಮ್ಮೆಗೆ ಚಾಲನೆ ದೊರಕಲಿದೆ. ಇದು ಕೊಡಗಿನ ಮೊದಲ ಬೋಡ್ ನಮ್ಮೆ. ಕೊನೆಯ ಬೋಡ್ ನಮ್ಮೆ ಜೂನ್ ಮೊದಲ ವಾರದಲ್ಲಿ ಪಾರಾಣೆಯಲ್ಲಿ ನಡೆಯಲಿದೆ. ಹೀಗಾಗಿ, ಕುಂದಾತ್ ಬೊಟ್ಟ್ ಲ್ ನೇಂದಾ ಕುದುರೆ ಪಾರಾಣ ಮಾನೀಲ್ ಅಳ್ಂಜ ಕುದುರೆ (ಕುಂದ ಬೆಟ್ಟದಲ್ಲಿ ನೆಗೆದ ಕುದುರೆ ಪಾರಾಣೆ ಮೈದಾನದಲ್ಲಿ ಇಳಿದ ಕುದುರೆ) ಎಂದು ಹಾಡುತ್ತಾರೆ ಎಂಬ ಅನಿಸಿಕೆ ಕುಂದ ಹಳ್ಳಿಗಟ್ಟು ನಿವಾಸಿ ಚಮ್ಮಟೀರ ಪ್ರವೀಣ್ ಉತ್ತಪ್ಪ ಅವರದು.

]]>
https://eprabhanews.com/2024/10/18/kaveri-abhisheka-at-kunda-mahadev-temple/feed/ 0 3071
ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಬಲಿ, ಬಿಹಾರದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ https://eprabhanews.com/2024/10/18/10-more-people-died-after-drinking-illegal-liquor/ https://eprabhanews.com/2024/10/18/10-more-people-died-after-drinking-illegal-liquor/#respond Fri, 18 Oct 2024 08:14:28 +0000 https://eprabhanews.com/?p=3068 ಪರಿವರ್ತನ್ ಪ್ರಭ:

ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಹೂಚ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಸಿವಾನ್ ನಲ್ಲಿ 28 ಮಂದಿ ಮತ್ತು ಸರನ್‌ನಿಂದ ಏಳು ಸಾವುಗಳು ವರದಿಯಾಗಿವೆ ಎಂದು ಸರನ್ ರೇಂಜ್ ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್(ಡಿಐಜಿ) ನೀಲೇಶ್ ಕುಮಾರ್ ಅವರು ಹೇಳಿದ್ದಾರೆ.

“ಸಿವಾನ್ ಜಿಲ್ಲೆಯ ಮಘರ್ ಮತ್ತು ಔರಿಯಾ ಪಂಚಾಯತ್‌ಗಳಲ್ಲಿ ಇದುವರೆಗೆ 28 ​​ಜನರು ಶಂಕಿತ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.

ಸರನ್ ಜಿಲ್ಲೆಯ ಮಶ್ರಖ್ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರ ಪ್ರದೇಶದಲ್ಲಿ ಏಳು ಮಂದಿ ಶಂಕಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಡಿಐಜಿ ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರ, ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಸೇವನೆ ಮೇಲೆ ನಿಷೇಧ ಹೇರಿದ ಪರಿಣಾಮ ಹೂಚ್ ದುರಂತಗಳು ಹೆಚ್ಚುತ್ತಿವೆ ಎಂದು ಆರೋಪಿಸಲಾಗಿದೆ.

ಎರಡೂ ಜಿಲ್ಲೆಗಳಲ್ಲಿ ಜನರು ಅಕ್ರಮ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಸಿವಾನ್, ಸರನ್ ಮತ್ತು ಪಾಟ್ನಾ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ 25 ಕ್ಕೂ ಹೆಚ್ಚು ಜನರು ಇನ್ನೂ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

]]>
https://eprabhanews.com/2024/10/18/10-more-people-died-after-drinking-illegal-liquor/feed/ 0 3068
ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ‘ಬಾಂಬ್ ಬೆದರಿಕೆ’ ಹಾಕಿದ್ದ ಖತರ್ನಾಕ್ ಆರೋಪಿ ಅರೆಸ್ಟ್! https://eprabhanews.com/2024/10/18/accused-of-bomb-threat-to-bangalore-schools-and-colleges-arrested/ https://eprabhanews.com/2024/10/18/accused-of-bomb-threat-to-bangalore-schools-and-colleges-arrested/#respond Fri, 18 Oct 2024 07:47:49 +0000 https://eprabhanews.com/?p=3065 ಪರಿವರ್ತನ್ ಪ್ರಭ:

ಬೆಂಗಳೂರು ನಗರದ ಹಲವು ಕಾಲೇಜುಗಳಿಗೆ ಬಾಂಬ್ ಇರಿಸಲಾಗಿದೆ ಎಂಬುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿತ್ತು. ಆ ಬಳಿಕ ಕಾಲೇಜುಗಳಲ್ಲಿ ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ಪೊಲೀಸರು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಓರ್ವ ವ್ಯಕ್ತಿಯನ್ನ ಬಂಧಿಸಲಾಗಿದೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:04/10/2024 ರಂದು ವಿ.ವಿ.ಪುರಂ ಠಾಣಾ ಸರಹದ್ದಿನಲ್ಲಿರುವ ಬೆಂಗಳೂರು ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ (ಬಿ.ಐ.ಟಿ) ಕಾಲೇಜಿನ ಪ್ರಾಂಶುಪಾಲರು ಹಾಜರಾಗಿ ಲಿಖಿತ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:04/10/2024 ರಂದು ಕಾಲೇಜಿನ ಆವರಣದಲ್ಲಿ ಹೈಡ್ರೋಜನ್‌ ಆಧಾರಿತ ಸುಧಾರಿತ ಐಇಡಿ ಗಳನ್ನು ಇಟ್ಟಿರುವುದಾಗಿ ಇ-ಮೇಲ್ ಐಡಿ s_ve sekr@hotmail.com ನಿಂದ ಬೆದರಿಕೆಯ ಇ ಮೇಲ್ ಸಂದೇಶವೊಂದು ಬಂದಿದ್ದು, ಈ ಕುರಿತು ಇ-ಮೇಲ್ ಕಳುಹಿಸಿರುವ ವ್ಯಕ್ತಿಯನ್ನು ಪತ್ತೆಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದಿದ್ದಾರೆ.

ಇದೇ ಪ್ರಕಾರ ದಿನಾಂಕ:04/10/2024 ರಂದು ಹನುಮಂತನಗರ ಪೊಲೀಸ್ ಠಾಣಾ ಸರಹದ್ದಿನ ಬಿ.ಎಂ.ಎಸ್ ಕಾಲೇಜಿನ ಪ್ರಾಂಶುಪಾಲರು ಸಹ ದೂರನ್ನು ಸಲ್ಲಿಸಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.
ಮೇಲೆ ತಿಳಿಸಿದ ಎರಡು ಪ್ರಕರಣಗಳ ತನಿಖೆಯನ್ನು ತಾಂತ್ರಿಕ ವಿಧಾನಗಳಿಂದ ಕೈಗೊಂಡು, ತನಿಖಾ ಕಾಲದಲ್ಲಿ ಈ ಪ್ರಕರಣದ ಓರ್ವ ವ್ಯಕ್ತಿಯನ್ನು ದಿನಾಂಕ:17/10/2024 ರಂದು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆ, ಸಾಲ್‌ರಿ ಟೌನ್‌ನಲ್ಲಿ ವಶಕ್ಕೆ ಪಡೆದುಕೊಂಡು, ಆತನನ್ನು ವಿಚಾರಣೆಗೊಳಪಡಿಸಿದಾಗ, ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಆರೋಪಿಯು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಹೆಚ್.ಪಿ ಕಂಪನಿಯ ಲ್ಯಾಪ್‌ಟಾಪ್ ಮತ್ತು ಒಂದು ನೋಕಿಯಾ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಯು 10 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಸಿರುತ್ತಾನೆ. ಬೆಂಗಳೂರು ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬಾಂಬ್‌ಗಳನ್ನು ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಿರುವ ಸಂಬಂಧ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿಯೂ ಈ ಆರೋಪಿಯ ಪಾತ್ರದ ಬಗ್ಗೆ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

ದಿನಾಂಕ:17/10/2024 ರಂದು ಆರೋಪಿಯನ್ನು ಪಶ್ಚಿಮ ಬಂಗಾಳದ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಟ್ರ್ಯಾನ್ಸಿಟ್ ವಾರೆಂಟ್‌ಗೆ ಕೋರಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿರುತ್ತೆ.
ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೊಕೇಶ್ ಬರಮಪ್ಪ ಜಗಲಸ‌, ಐ.ಪಿ.ಎಸ್ ರವರ ಮತ್ತು ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಶಾಮೀದ್ ಪಾಷ ರವರ ಮಾರ್ಗದರ್ಶನದಲ್ಲಿ ಎ.ಎ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದು ಹೇಳಿದೆ.

]]>
https://eprabhanews.com/2024/10/18/accused-of-bomb-threat-to-bangalore-schools-and-colleges-arrested/feed/ 0 3065
ಮೊದಲ ಸಭೆಯಲ್ಲೆ ‘ರಾಜ್ಯ ಸ್ಥಾನಮಾನ’ದ ನಿರ್ಣಯ ಅಂಗೀಕರಿಸಿದ ಜಮ್ಮು-ಕಾಶ್ಮೀರ ಕ್ಯಾಬಿನೆಟ್ https://eprabhanews.com/2024/10/18/jammu-and-kashmir-cabinet-passed-the-resolution-on-state-status-in-its-first-meeting/ https://eprabhanews.com/2024/10/18/jammu-and-kashmir-cabinet-passed-the-resolution-on-state-status-in-its-first-meeting/#respond Fri, 18 Oct 2024 06:32:18 +0000 https://eprabhanews.com/?p=3062 ಪರಿವರ್ತನ್ ಪ್ರಭ:

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಕ್ಯಾಬಿನೆಟ್ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕರೆ ನೀಡುವ ನಿರ್ಣಯವನ್ನು ಅಂಗೀಕರಿಸಿದೆ.
ಅಬ್ದುಲ್ಲಾ ಅವರು ಸಿದ್ಧಪಡಿಸಿದ ನಿರ್ಣಯವು ಜಮ್ಮು-ಕಾಶ್ಮೀರಕ್ಕೆ ಆದಷ್ಟು ಬೇಗ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಹೊಸದಾಗಿ ಆಯ್ಕೆಯಾದ ಸಿಎಂ ಅಬ್ದುಲ್ಲಾ ಮುಂಬರುವ ದಿನಗಳಲ್ಲಿ ದೆಹಲಿಗೆ ಪ್ರಯಾಣಿಸಲಿದ್ದು, ನಿರ್ಣಯವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕವಾಗಿ ಪ್ರಸ್ತುತಪಡಿಸಲಿದ್ದಾರೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ, ಸಚಿವರಾದ ಸಕೀನಾ ಇಟೂ, ಜಾವೇದ್ ಅಹ್ಮದ್ ರಾಣಾ, ಜಾವೇದ್ ಅಹ್ಮದ್ ದಾರ್ ಮತ್ತು ಸತೀಶ್ ಶರ್ಮಾ ಭಾಗವಹಿಸಿದ್ದರು. 2019 ರಲ್ಲಿ ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೆಳದರ್ಜೆಗೆ ಇಳಿಸಿದಾಗ ಅದರ ಮರುಸಂಘಟನೆಯ ನಂತರ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವುದು ದೀರ್ಘಕಾಲದ ಬೇಡಿಕೆಯಾಗಿದೆ.

ಎನ್ಸಿಯ ಮೈತ್ರಿ ಪಾಲುದಾರ ಕಾಂಗ್ರೆಸ್ ಅಬ್ದುಲ್ಲಾ ಅವರ ಕ್ಯಾಬಿನೆಟ್ಗೆ ಸೇರಲಿಲ್ಲ. ಹಾಗೆ ಮಾಡಲು ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವ ಷರತ್ತಾಗಿತ್ತು. ಕೇಂದ್ರವು ಶೀಘ್ರದಲ್ಲೇ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲಿದೆ ಎಂದು ಎನ್ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುತೂಹಲಕಾರಿ ಸಂಗತಿಯೆಂದರೆ, ಕ್ಯಾಬಿನೆಟ್ನ ಆರಂಭಿಕ ಸಭೆಯಲ್ಲಿ ಘೋಷಿಸಿದ ಇತರ ನಿರ್ಧಾರಗಳಿಗೆ ವ್ಯತಿರಿಕ್ತವಾಗಿ ಈ ನಿರ್ಣಯದ ಅಂಗೀಕಾರವನ್ನು ಸಾರ್ವಜನಿಕಗೊಳಿಸಲಾಗಿಲ್ಲ. ಈ ಪ್ರಮುಖ ನಿರ್ಣಯದ ಸುತ್ತಲಿನ ಪಾರದರ್ಶಕತೆಯ ಕೊರತೆಯು ರಾಜಕೀಯ ವೀಕ್ಷಕರು ಮತ್ತು ಸ್ಥಳೀಯ ಮಧ್ಯಸ್ಥಗಾರರಲ್ಲಿ ಪ್ರಶ್ನೆಗಳು ಮತ್ತು ಊಹಾಪೋಹಗಳನ್ನು ಹುಟ್ಟುಹಾಕಿದೆ.

ಪ್ರತಿಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕ ಮತ್ತು ಶಾಸಕ ವಹೀದ್-ಉರ್-ರೆಹಮ್ನ್ ಪರ್ರಾ ಅವರು ರಾಜ್ಯ ಸ್ಥಾನಮಾನದ ನಿರ್ಣಯವನ್ನು ಅಂಗೀಕರಿಸುವುದನ್ನು ಟೀಕಿಸುತ್ತಾ, ಇದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಆಗಸ್ಟ್ 5, 2019 ರ ನಿರ್ಧಾರವನ್ನು ಅಂಗೀಕರಿಸಿದೆ ಎಂದು ಹೇಳಿದರು.

ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವ ಬೇಡಿಕೆಯ ಮೇಲೆ ಮಾತ್ರ ಕೇಂದ್ರೀಕರಿಸುವ ನಿರ್ಣಯವು ಹಿಂದಿನ ನಿಲುವುಗಳಿಂದ, ವಿಶೇಷವಾಗಿ 370 ನೇ ವಿಧಿಯನ್ನು ಪುನಃಸ್ಥಾಪಿಸುವ ಭರವಸೆಯಿಂದ ಗಮನಾರ್ಹ ಬದಲಾವಣೆಯನ್ನು ಪ್ರತಿನಿಧಿಸುತ್ತದೆ ಎಂದು ಪರ್ರಾ ಹೇಳಿದರು.

ಇದಕ್ಕೂ ಮೊದಲು, ಡಿಸೆಂಬರ್ 11, 2023 ರಂದು, ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದನ್ನು ಸರ್ವಾನುಮತದಿಂದ ಎತ್ತಿಹಿಡಿದಿತ್ತು. ಇದಲ್ಲದೆ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯನ್ನು ಸೆಪ್ಟೆಂಬರ್ 2024 ರೊಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು, ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಆದಷ್ಟು ಬೇಗ ಪುನಃಸ್ಥಾಪಿಸಬೇಕು ಎಂದು ಎತ್ತಿ ತೋರಿಸಿದೆ.

]]>
https://eprabhanews.com/2024/10/18/jammu-and-kashmir-cabinet-passed-the-resolution-on-state-status-in-its-first-meeting/feed/ 0 3062